ಬೆಂಗಳೂರು: ನಗರದ ಖಾಸಗಿ ಶಾಲೆಯಲ್ಲಿ ಹೋಂ ವರ್ಕ್ ಮಾಡಿಲ್ಲವೆಂದು ವಿದ್ಯಾರ್ಥಿಗೆ ಥಳಿಸಿದ ಆರೋಪ ಕೇಳಿಬಂದಿದೆ.
ಏಳನೇ ತರಗತಿ ವಿದ್ಯಾರ್ಥಿ ಮಹಮ್ಮದ್ ಫರ್ದೀನ್‍ಗೆ ಹೋಂ ವರ್ಕ್ ಮಾಡಿಲ್ಲವೆಂದು ಶಾಲಾ ಶಿಕ್ಷಕಿ ಕೈಗೆ ರಾಡ್‍ನಲ್ಲಿ ರಕ್ತ ಬರುವಂತೆ ಹೊಡೆದಿದ್ದಾರೆ ಎಂದು ಆರೋಪಿಸಲಾಗಿದೆ.
ವಿದ್ಯಾರ್ಥಿ ಕೈಗೆ ಗಂಭೀರ ಗಾಯಗಳಾಗಿದ್ದು, ಹುಳಿಮಾವು ಸಾಯಿ ರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫರ್ದಿನ್ ಕೈಗೆ ಆರು ಹೊಲಿಗೆ ಹಾಕಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ವಿದ್ಯಾರ್ಥಿ, ಅಸೈನ್ಮೆಂಟ್ ಮಾಡಿಲ್ಲ ಎಂಬ ಕಾರಣಕ್ಕೆ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾಗಿ ಆರೋಪಿಸಿದ್ದಾನೆ.