ವಿಟ್ಲ : ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ಮೊಬೈಲ್ ನ್ನು ಎಗರಿಸಿದ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ವಿಟ್ಲದ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ಗೆ ವ್ಯಕ್ತಿಯೊಬ್ಬ ಬಂದಿದ್ದು ಮೊದಲಿಗೆ ಗ್ರಾಹಕರಂತೆ ಬಂದು ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ನ್ನು ಚಾಲಾಕಿತನದಿಂದ ಎಗರಿಸಿದ್ದಾನೆ.
ಈ ಕಳ್ಳತನ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.